ಮುಖಪುಟ /ಸುದ್ದಿ ಸಮಾಚಾರ   

ಅಭಿವೃದ್ಧಿಗೆ ಅಡ್ಡಿ ಪಡಿಸುತ್ತಿದ್ದ ಪ್ರತಿಪಕ್ಷಗಳಿಗೆ ತಕ್ಕ ಪಾಠ: ಮುಖ್ಯಮಂತ್ರಿ

bbmpಬೆಂಗಳೂರು, ಏ.5: ಬಿಬಿಎಂಪಿಯಲ್ಲಿ ಪಕ್ಷ ಜಯಭೇರಿ ಬಾರಿಸಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನಿಂದ ಪಕ್ಷದ ಜವಾಬ್ದಾರಿ ಹೆಚ್ಚಿದ್ದು, ಬೆಂಗಳೂರು ಮಹಾನಗರ ಅಭಿವೃದ್ಧಿಗೆ ಹೊಸ ಸೂತ್ರ ರೂಪಿಸುವುದಾಗಿ ಪ್ರಕಟಿಸಿದ್ದಾರೆ. ವಾರ್ಡ್ ವಾರು ಸಮಿತಿ ರಚಿಸಿ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.

ಪಕ್ಷಕ್ಕೆ ಅಭೂತಪೂರ್ವ ಬೆಂಬಲ ನೀಡಿದ ಬೆಂಗಳೂರಿನ ಮತದಾರರಿಗೆ ಕೃತಜ್ಞತೆ ಅರ್ಪಿಸಿದ ಅವರು, ಸರ್ಕಾರದ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ವಿನಾ ಕಾರಣ ಅಡ್ಡಿಪಡಿಸುತ್ತಿರುವ ಪ್ರತಿಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಇನ್ನು ಮುಂದಾದರೂ ಪ್ರತಿಪಕ್ಷಗಳು ಸರ್ಕಾರದ ಅಭಿವೃದ್ಧಿ ಮಂತ್ರಕ್ಕೆ ಒತ್ತಾಸೆಯಾಗಬೇಕು ಎಂದರು.

ಮುಂದಿನ ತಿಂಗಳು ನಡೆಯಲಿರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸಹ  ಪಕ್ಷಕ್ಕೆ ಜನ ಆಶೀರ್ವದಿಸುತ್ತಾರೆ ಎಂದರು.

 ಮುಖಪುಟ /ಸುದ್ದಿ ಸಮಾಚಾರ