ಮುಖಪುಟ /ಸುದ್ದಿ ಸಮಾಚಾರ 

ಆರು ಮಾಜಿ ಸಿಎಂಗಳು ಚುನಾವಣಾ ಕಣದಲ್ಲಿ...

HDK, BSYಬೆಂಗಳೂರು, ಏ.2- ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆರು ಮಾಜಿ ಮುಖ್ಯಮಂತ್ರಿಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ತಮ್ಮ ತವರು ಜಿಲ್ಲೆ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುನರಾಯ್ಕೆ ಬಯಸಿದ್ದಾರೆ.
DVSಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಇಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ಇನ್ನು ಹಾಲಿ ಶಾಸಕರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ Dharm singhಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿಯನ್ನು ಪ್ರತಿನಿಧಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಬೀದರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಒಟ್ಟಿನಲ್ಲಿ ೨೦೧೪ರ ಲೋಕಸಭೆ ಚುನಾವಣೆ, ರಾಜ್ಯದಲ್ಲಿ ಐವರು ಮಾಜಿ ಮುಖ್ಯಮಂತ್ರಿಗಳ ರಾಜಕೀಯ ಹೋರಾಟಕ್ಕೆ ವೇದಿಕೆ ಕಲ್ಪಿಸಿದೆ. ಮಾಜಿ ಸಿಎಂಗಳ ಸ್ಪರ್ಧೆಯಿಂದ ಈ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಇಲ್ಲಿ ಮತದಾರ ಯಾರ ಕೈಹಿಡಿಯುತ್ತಾನೆ ಎಂಬುದು ಕುತೂಹಲ ಕೆರಳಿಸಿದೆ.

 

ಮುಖಪುಟ /ಸುದ್ದಿ ಸಮಾಚಾರ