ಮುಖಪುಟ /ಸುದ್ದಿ ಸಮಾಚಾರ 

ಕರ್ನಾಟಕ ಬಂದ್ - ಕನ್ನಡಿಗರ ಶಕ್ತಿ ಪ್ರದರ್ಶನ

ಬೆಂಗಳೂರು, ಏ.18 ಮೇಕೆದಾಟುವಿನಲ್ಲಿ ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಸಿರುವ ಅಣೆಕಟ್ಟೆಗೆ ತಮಿಳುನಾಡು ಸರ್ಕಾರ ತಕರಾರು ಮಾಡುತ್ತಿರುವುದನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮೈಸೂರು, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಚಾಮರಾಜನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿದಂತೆ ಹಳೆ ಮೈಸೂರು ಮತ್ತು ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಉಳಿದೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಟ್ಟಾರೆಯಾಗಿ ಕರ್ನಾಟಕ ಬಂದ್ ಯಶಸ್ವಿಯಾಗಿದ್ದು, ಸಂಪೂರ್ಣ ಶಾಂತಿಯುತವಾಗಿತ್ತು.

ಅಂಗಡಿ ಮುಂಗಟ್ಟುಗಳ ಮಾಲಿಕರು ಸ್ವಯಂ ಪ್ರೇರಿತರಾಗಿ ತಮ್ಮ ಮಳಿಗೆಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ನಗರದ ಬೃಹತ್ ಮಾಲ್‌ಗಳು, ಪೆಟ್ರೋಲ್ ಬಂಕ್ ಗಳು ಬಂದ್ ಆಗಿದ್ದು ರಸ್ತೆಗಳಲ್ಲಿ ವಾಹನ ಸಂಚಾರ ತೀರಾ ವಿರಳವಾಗಿತ್ತು.

ಕನ್ನಡ ಪರ ಸಂಘಟನೆಗಳು ಬೆಳಗ್ಗೆಂದಲೇ ರಸ್ತೆಗಳಲ್ಲಿ ಟೈರ್ ಗಳನ್ನು ಹಾಕಿ ಬೆಂಕಿ ಹಚ್ಚಿದ "ನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೃಹತ್ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ವಾಹನ ಸಂಚಾರ ಸ್ಥಗಿತಗೊಳಿಸಿದ "ನ್ನೆಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರು ಮನೆ, ಕಚೇರಿ ತಲುಪಲು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಹಾಗೂ ವಿದ್ಯುತ್ ಉತ್ಪಾದನೆಯ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟಿನಲ್ಲಿ ಅಣೆಕಟ್ಟೆ ನಿರ್ಮಿಸಲು ಉದ್ದೇಸಿದೆ.

 

ಮುಖಪುಟ /ಸುದ್ದಿ ಸಮಾಚಾರ