ಮುಖಪುಟ /ಸುದ್ದಿ ಸಮಾಚಾರ 

ಕರ್ನಾಟಕ ಬಂದ್ ಬಿಗಿ ಭದ್ರತೆ

ಬೆಂಗಳೂರು, ಏ.18  ಬೆಂಗಳೂರು ನಗರದಲ್ಲಿ ಕರ್ನಾಟಕ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.

ಇಂದು ಬೆಳಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ರಾಜ್ಯದ ರಾಜಧಾನಿಯ ವಿವಿಧ ಪ್ರದೇಶಗಳ್ಲಲಿ ಪರಿಸ್ಥಿತಿಯ ಖುದ್ದು ಅವಲೋಕನ ನಡೆಸಿದರು.

ನಗರದ  ವಿವಿಧ ಭಾಗಗಳಿಗೆ ಭೇಟಿ ನೀಡಿದ್ದ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ರೌಡಿ ಶೀಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವವರ ವಿರುದ್ಧ ಕ್ರಮ ಕೈಗೋಳ್ಳಲಾಗುವುದು ಎಂದರು.

ನಗರದ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ, ಹೋಂಗಾರ್ಡ್, ಕೆ.ಎಸ್.ಆರ್.ಪಿ. ಹಾಗೂ ತುರ್ತು ಪ್ರಹಾರ ದಳಗಳನ್ನು ನಿಯೋಜಿಸಲಾಗಿದ್ದು, ಈ ತುಕಡಿಗಳು ಬೆಂಗಳೂರಿನಾದ್ಯಂತ ಸಂಚರಿಸಿ ಯಾವುದೆ ಅ"ತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಈ ಮಧ್ಯೆ ಬೆಂಗಳೂರು ನಗರ ರೈಲು ನಿಲ್ದಾಣದಲ್ಲಿ ಗುಂಪು ಸೇರದಂತೆ ಎಚ್ಚರ ವಹಿಸಲಾಗಿತ್ತು. ಪ್ರಯಾಣಿಕರನ್ನು ತಪಾಸಣೆ ಮಾಡಿ ಒಳಗೆ ಬಿಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಮುಖಪುಟ /ಸುದ್ದಿ ಸಮಾಚಾರ