ಮುಖಪುಟ /ಸುದ್ದಿ ಸಮಾಚಾರ   

ಆದಿ ಬಣಜಿಗರ ಮೀಸಲಾತಿ : ಸಂಪುಟದಲ್ಲಿ ತೀರ್ಮಾನ - ಸಿಎಂ

ಬೆಂಗಳೂರು ೨೬:  ಆದಿ ಬಣಜಿಗರು ಸೇರಿದಂತೆ ಬಿಟ್ಟುಹೋಗಿರುವ ಹಿಂದುಳಿದ ಜಾತಿಗಳನ್ನು ೨ಎ ಗೆ ಸೇರ್ಪಡೆ ಮಾಡುವ ಬಗ್ಗೆ ಬರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆದಿ ಬಣಜಿಗರನ್ನು ೨ಎ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆ ಹಲವಾರು ದಿನಗಳಿಂದ ಇದ್ದು, ಇದರ ಬಗ್ಗೆ ಸರ್ಕಾರ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರ ನೇಮಕಾತಿಯನ್ನು ಆದಷ್ಟು ಬೇಗನೆ ನೇಮಕ ಮಾಡಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ ಅವರು ಹಿಂದುಳಿದ ವರ್ಗಗಳ ಸಮೀಕ್ಷೆಗೆ ಎಲ್ಲ ರೀತಿಯ ಅನುಕೂಲಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ಪರಿಹಾರ ಸೌಲಭ್ಯ ಕಲ್ಪಿಸಿಕೊಡಲು ಹಣಕಾಸಿನ ಕೊರತೆ ಇಲ್ಲ, ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ತಕ್ಷಣವೇ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕೆಂದು ಹೇಳಿರುವುದಾಗಿ ಅವರು ತಿಳಿಸಿದರು. ತಾವೂ ಸಹ ಹಾನಿಗೀಡಾದ ಕೆಲವು ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.

 ಮುಖಪುಟ /ಸುದ್ದಿ ಸಮಾಚಾರ