ಮುಖಪುಟ /ಸುದ್ದಿ ಸಮಾಚಾರ   

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಬೆಂಗಳೂರು, ಆಗಸ್ಟ್ ೩೧:   ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ  ಸಂಸ್ಥೆಗಳು ಒಟ್ಟಾಗಿ ನವೆಂಬರ್ ೦೧, ೧೯೮೫ ರಿಂದ ಕರ್ನಾಟಕದಲ್ಲಿರುವ  ಕನ್ನಡ  ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿವೆ.  ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ, ಕೆ.ಎಸ್.ಆರ್.ಟಿ.ಸಿ. ವಿಶ್ವವಿದ್ಯಾನಿಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು.   ಈ ನೋಂದಣಿತರು ಯಾವುದೇ ಶುಲ್ಕವನ್ನು ಕೊಡಬೇಕಾಗಿಲ್ಲ ಆದರೆ ಸಾರ್ವಜನಿಕರು ಅರ್ಜಿಯ ಜೊತೆಯಲ್ಲಿ ರೂ. ೨೫೦/- ನ್ನು ನಿರ್ದೇಶಕರು, ಭಾರತೀಯ ಭಾಷೆಗಳ ಕೇಂದ್ರ ಸಂಖ್ಯೆ ಮಾನಸಗಂಗೋತ್ರಿ, ಮೈಸೂರು  ಇವರ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್‌ನ್ನು ಕಳುಹಿಸಿಕೊಡಬೇಕು.

ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾದಲ್ಲಿ ಅವರ ಕಛೇರಿ ಗೈರು ಹಾಜರಿಯನ್ನು ಅನ್ಯಕಾರ್ಯನಿಮಿತ್ತ  ಎಂದು ಪರಿಗಣಿಸಲಾಗುವುದು.  ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ಇರುತ್ತದೆ.

ಇಪ್ಪತ್ತೈದನೆಯ ತಂಡದ ತರಬೇತಿಯು ನವೆಂಬರ್ ೦೧, ೨೦೧೦ ರಿಂದ ಆರಂಭವಾಗುತ್ತದೆ.  ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು  ೫೭೦ ೦೦೬ ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು.  ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ಅಕ್ಟೋಬರ್ ೩೧, ೨೦೧೦ ಒಳಗೆ ತಲುಪಬೇಕೆಂದು ಪ್ರಕಟಣೆ ತಿಳಿಸಿದೆ.  

 ಮುಖಪುಟ /ಸುದ್ದಿ ಸಮಾಚಾರ