ಮುಖಪುಟ /ಸುದ್ದಿ ಸಮಾಚಾರ 

ಹಿರಿಯ ಚಿಂತಕ ಡಾ. ಯು.ಆರ್. ಅನಂತಮೂರ್ತಿ ಅಸ್ತಂಗತ
ಜನನ 21-12-19
32 ನಿಧನ- 22-08-14

ಬೆಂಗಳೂರು, ಆ.22.  ಹಿರಿಯ ಸಾಹಿತಿ, ನಾಡಿನ ಶ್ರೇಷ್ಠ ಚಿಂತಕ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್‌ ಅನಂತಮೂರ್ತಿ (82) ಇಂದು ಸಂಜೆ ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಅವರನ್ನು ಉಳಿಸಿಕೊಳ್ಳಲು ಆಸ್ಪತ್ರೆಯ ವೈದ್ಯರು ಮಾಡಿದ ಎಲ್ಲ ಪ್ರಯತ್ನ ವಿಫಲವಾಗಿದ್ದು, ಸಂಜೆ 6 ಗಂಟೆ ಸುಮಾರಿನಲ್ಲಿ ಅವರು ನಿಧನ ಹೊಂದಿದರು ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಸುದರ್ಶನ ಬಲ್ಲಾಳ್ ತಿಳಿಸಿದರು.

ಕಳೆದ ಕೆಲವು ವರ್ಷಗಳಿಂದ ಮೂತ್ರ ಪಿಂಡದ ತೊಂದರೆಯಿಂದ ಬಳಲುತ್ತಿದ್ದ ಅನಂತ ಮೂರ್ತಿ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಕಳೆದ 10-12 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ರಾತ್ರಿಯಿಂದ ಅವರ ಆರೋಗ್ಯದಲ್ಲಿ ತೀವ್ರ ಏರು ಪೇರಾಗಿತ್ತು, ಕಿಡ್ನಿ ತೊಂದರೆಯ ಜೊತೆಗೆ ಮಧುಮೇಹ ಹಾಗೂ ಹೃದಯ ಸಂಬಂಧಿ ತೊಂದರೆಯಿಂದಲೂ ಅವರು ಬಳಲುತ್ತಿದ್ದರು. ನಿನ್ನೆಯಿಂದಲೂ ವೆಂಟಿಲೇಟರ್ ನೆರವಿನಿಂದ ಉಸಿರಾಡುತ್ತಿದ್ದ ಅನಂತ ಮೂರ್ತಿ ಅವರಿಗೆ ಇಂದು ಸಂಜೆ ಲಘು ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರ ದೇಹಸ್ಥಿತಿ ಮತ್ತಷ್ಟು ವಿಷಮಿಸಿತು.  ಅವರನ್ನು ಉಳಿಸಿಕೊಳ್ಳಲು ನಡೆಸಿದ ಎಲ್ಲ ಪ್ರಯತ್ನಗಳೂ ವಿಫಲವಾದವು ಎಂದು ವೈದ್ಯರು ತಿಳಿಸಿದರು.

ಸಂಸ್ಕಾರ, ಭಾರತೀಪುರ, ಎಂದೆಂದೂ ಮುಗಿಯದ ಕಥೆ, ದಿವ್ಯ, ಪ್ರಶ್ನೆ, ಮೌನಿ, ಅವಸ್ಥೆ, ಪ್ರಜ್ಞೆ ಮತ್ತು ಪರಿಸರ, ಅವಾಹನೆ, ಘಟಶ್ರಾದ್ಧ, ಬರ, ಆಕಾಶ ಮತ್ತು ಬೆಕ್ಕು, ಸಮಕ್ಷಮ, ಪೂರ್ವಾಪರ, ಹದಿನೈದು ಪದ್ಯಗಳು, ಅಜ್ಜನ ಹೆಗಲ ಸುಕ್ಕುಗಳು, ಮಿಥುನ ಮೊದಲಾದ ಅಮೂಲ್ಯ ಕೃತಿಗಳನ್ನು ಅನಂತ ಮೂರ್ತಿ ರಚಿಸಿದ್ದರು.

ಡಾ. ಅನಂತಮೂರ್ತಿ ಆಸ್ಪತ್ರೆಗೆ ದಾಖಲು

 ಮುಖಪುಟ /ಸುದ್ದಿ ಸಮಾಚಾರ