ಮುಖಪುಟ /ಸುದ್ದಿ ಸಮಾಚಾರ   
 

ಕೇಂದ್ರ ಸಂಪುಟಕ್ಕೆ ಎಸ್.ಎಂ.ಕೃಷ್ಣ?

S.M.Krishnaನವದೆಹಲಿ, ಡಿ.9: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಗಳು ಕಾಣಿಸುತ್ತಿವೆ. ರಾಜ್ಯದ ಉಪ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರು ಕಣಕ್ಕಿಳಿದಿದ್ದಾರೆ.

ಮಾಜಿ ಮುಖ್ಯಮಂತ್ರಿ ದೇವೇಗೌಡರ ಕುಟುಂಬದಿಂದ ರಾಜಕೀಯ ಪ್ರವೇಶಿಸಿದ ಪ್ರಥಮ ಮಹಿಳೆ ಎಂಬ ಖ್ಯಾತಿಗೂ ಇವರು ಪಾತ್ರರಾಗಿದ್ದಾರೆ.

ಈ ಮಧ್ಯೆ ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿಯೂ ಭಾರೀ ಬದಲಾವಣೆ ಆಗುವ ನಿರೀಕ್ಷೆ ಇದೆ. ಈಗ ಕೇಂದ್ರ ಸಚಿವ ಸಂಪುಟಕ್ಕೂ ಇಬ್ಬರು ಸಚಿವರು ಸೇರ್ಪಡೆಯಾಗುವ ಲಕ್ಷಣಗಳು ಕಾಣಿಸುತ್ತಿದ್ದು, ಆ ಅವಕಾಶ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಒಲಿದರೂ ಅಚ್ಚರಿ ಇಲ್ಲ.

ಮುಂಬೈ ಉಗ್ರರ ದಾಳಿ ಹಿನ್ನೆಲೆಯಲ್ಲಿ ಶಿವರಾಜ ಪಾಟೀಲ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ, ಪ್ರಿಯರಂಜನ್ ದಾಸ್ ಮುನ್ಷಿ ಅವರು ಅನಾರೋಗ್ಯದ ಕಾರಣ ಖಾತೆ ರಹಿತ ಸಚಿವರಾಗಿದ್ದಾರೆ. ಚಿದಂಬರಂ ಅವರನ್ನು ಗೃಹ ಸಚಿವರನ್ನಾಗಿ ಮಾಡಿರುವ ಪ್ರಧಾನಿ ಹಣಕಾಸು ಖಾತೆಯನ್ನು ತಾವೇ ನಿರ್ವಹಿಸುತ್ತಿದ್ದಾರೆ. ಹೆಚ್ಚುವರಿ ಹೊರೆಯನ್ನು ಈಗವರು ಸಂಪುಟಕ್ಕೆ ಇಬ್ಬರು ಸಚಿವರನ್ನು ಸೇರಿಸಿಕೊಂಡು ಹಂಚಿಕೆ ಮಾಡುವ ಸಾಧ್ಯತೆ ಇದೆ.

ಎಸ್.ಎಂ.ಕೃಷ್ಣ ಅವರು ಸಂಪುಟಕ್ಕೆ ಸೇರ್ಪಡೆಯಾದರೆ ಪರಿಸರ ಖಾತೆ ದೊರಕುವ ಸಾಧ್ಯತೆ ಇದೆ. 

ಮುಖಪುಟ /ಸುದ್ದಿ ಸಮಾಚಾರ