ಮುಖಪುಟ /ಸುದ್ದಿ ಸಮಾಚಾರ   

ಯಡಿಯೂರಪ್ಪ ಆಗಲಿದ್ದಾರೆ ಡಾಕ್ಟರ್

B.S.Yediyurappa, Chief minister, Government of Karnatakaಬೆಂಗಳೂರು, ಡಿ.11: ಕಳೆದ 3 ದಶಕಗಳಿಂದ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯ ರಾಜಕಾರಣಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲು ಅಮೆರಿಕದ ಮಿಚಿಗನ್ ಪ್ರಾಂತ್ಯದ ಸ್ಯಾಗಿನಾವ್ ವ್ಯಾಲಿ ಸ್ಟೇಟ್ ಯುನಿವರ್ಸಿಟಿ  ನಿರ್ಧರಿಸಿದೆ.

ಸಾರ್ವಜನಿಕ ಜೀವನದಲ್ಲಿ ಯಡಿಯೂರಪ್ಪನವರು ನೀಡಿರುವ ಅನುಪಮ ಕೊಡುಗೆಯನ್ನು ಗುರುತಿಸಿ ಅವರಿಗೆ ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಇಂದು ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.

12ರಂದು ಯಡಿಯೂರಪ್ಪನವರು ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಾಪಿಸಲಾಗಿರುವ ವೀರರಾಣಿ ಕಿತ್ತೂರು ಚೆನ್ನಮ್ಮಾಜಿಯ ಪುತ್ಥಳಿಯನ್ನು ಸಹ ಅನಾವರಣ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಅಭಿನಂದನೆ: ಸ್ಯಾಗಿನಾವ್ ವ್ಯಾಲಿ ಸ್ಟೇಟ್ ಯೂನಿವರ್ಸಿಟಿಯ ಗೌರವ ಡಾಕ್ಟರೇಟ್ ಪಡೆಯಲು ಅಮೆರಿಕಕ್ಕೆ ತೆರಳುತ್ತಿರುವ ಮುಖ್ಯಮಂತ್ರಿಗಳಿಗೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮುಖಪುಟ /ಸುದ್ದಿ ಸಮಾಚಾರ