ಮುಖಪುಟ /ಸುದ್ದಿ ಸಮಾಚಾರ   

ಬಿ.ಎಸ್.ವೈ.ಗೆ ಡಾಕ್ಟರೇಟ್ ಪ್ರದಾನ

Dr.yediyurappa, chief minister of karnataka,ಬೆಂಗಳೂರು, ಡಿ.13: ಕಳೆದ 4 ದಶಕಗಳಿಂದ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯ ರಾಜಕಾರಣಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಮೆರಿಕದ ಮಿಚಿಗನ್ ಪ್ರಾಂತ್ಯದ ಸ್ಯಾಗಿನಾವ್ ವ್ಯಾಲಿ ಸ್ಟೇಟ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ನಿನ್ನೆ ಸಂಜೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ವಿಶ್ವವಿದ್ಯಾಲಯದ ಆವರಣದಲ್ಲಿ ರಾಣಿ ಚೆನ್ನಮ್ಮಾಜಿಯ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ತಮ್ಮ ವಿದ್ಯಾರ್ಥಿ ದೆಸೆಯಿಂದಲೂ ತಾವು ಸ್ವಾತಂತ್ರ್ಯ ಹೋರಾಟಗಾರರಾದ ಕಿತ್ತೂರು ರಾಣಿ ಚೆನ್ನಮ್ಮ, ಮಹಾತ್ಮಾಗಾಂಧಿ ಮೊದಲಾದವರ ಜೀವನ ಚರಿತ್ರೆಗಳಿಂದ ಪ್ರಭಾವಿತರಾಗಿದ್ದಾಗಿ ತಿಳಿಸಿದರು.

Yediyurappa, rani channammaji, americaದೀರ್ಘಕಾಲ ಕರ್ನಾಟಕ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ದುರ್ಬಲರ ಮತ್ತು ಶೋಶಿತರ ಪರ ಧ್ವನಿ ಎತ್ತಿ ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾಗಿ ಅವರು ಹೇಳಿದರು.

ಪ್ರಸ್ತುತ ಮುಖ್ಯಮಂತ್ರಿಗಳಾಗಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೆ ಹಲವು ಕಲ್ಯಾಣ ಕಾರ್ಯಕ್ರಮ ರೂಪಿಸಿರುವುದಾಗಿಯೂ ತಿಳಿಸಿದರು.

ವಿ.ವಿ. ಅಧ್ಯಕ್ಷ ಡಾ.ಗಿಲ್ಬರ್ಟ್ ಸನ್, ಡಾ. ಮಹೇಂದ್ರ ಕಂಠಿ ಮತ್ತಿತರರು ಪಾಲ್ಗೊಂಡಿದ್ದರು.

ಮುಖಪುಟ /ಸುದ್ದಿ ಸಮಾಚಾರ