ಮುಖಪುಟ /ಸುದ್ದಿ ಸಮಾಚಾರ   
 

ಪಂಚಲಿಂಗ ಮಹೋತ್ಸವಕ್ಕೆ 100 ಕೋಟಿ - ಮುಖ್ಯಮಂತ್ರಿ

ಬೆಂಗಳೂರು, ಡಿ. 4 : ವಿಶ್ವವಿಖ್ಯಾತ ತಲಕಾಡಿನಲ್ಲಿ ಮುಂದಿನ ವರ್ಷ ನವೆಂಬರ್‌ನಲ್ಲಿ ನಡೆಯಲಿರುವ ಐತಿಹಾಸಿಕ ಪಂಚಲಿಂಗ ದರ್ಶನಕ್ಕೆ ದೇಶದ ನಾನಾ ಭಾಗಗಳಿಂದ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸಕಲ ಅನುಕೂಲತೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪಂಚಲಿಂಗ ದರ್ಶನ ಮಹೋತ್ಸವ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ಅವರು  ತಿಳಿಸಿದರು.

ಪಂಚಲಿಂಗ ದರ್ಶನಕ್ಕಾಗಿ ದೇಶ ವಿದೇಶಗಳಿಂದ 25 -30  ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ತಲಕಾಡಿಗೆ ಸಂಪರ್ಕ ಕಲ್ಪಿಸುವ ಗ್ರಾಮಾಂತರ ರಸ್ತೆಗಳ ಅಭಿವೃದ್ಧಿಗೆ ಆದೇಶ ನೀಡಲಾಗಿದೆ. ಜಿಲ್ಲಾ ಪಂಚಾಯ್ತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಮುಖಪುಟ /ಸುದ್ದಿ ಸಮಾಚಾರ