ಮುಖಪುಟ /ಸುದ್ದಿ ಸಮಾಚಾರ   
 

ವಿಜ್ಞಾನಿಗಳು ಆಹಾರೋತ್ಪಾದನೆ ಹೆಚ್ಚಳಕ್ಕೆ ಶ್ರಮಿಸಬೇಕು - ರಾಷ್ಟ್ರಪತಿ

Prathibha devisingh patilತುಮಕೂರು, ಫೆ.2 ಭಾರತ ಜನಸಂಖ್ಯೆಯಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಚೀಣಾವನ್ನು ಹಿಂದೆ ಹಾಕಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಜನಸಂಖ್ಯಾ ನೀತಿಯನ್ನು ಪರಾಮರ್ಶಿಸುವ ಅಗತ್ಯವಿದೆ. ಜೊತೆಗೆ ಜನಸಂಖ್ಯೆಗನುಗುಣವಾಗಿ ಆಹಾರೋತ್ಪಾದನೆಯನ್ನು ಹೆಚ್ಚಿಸುವ ಅಗತ್ಯವೂ ಇದೆ ಎಂದು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಪ್ರತಿಪಾದಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿಂದು ನಡೆದ ಡಾ.ಶಿವಕುಮಾರ ಸ್ವಾಮಿಗಳ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜನ ಹಸಿವಿನಿಂದ ಬಳಲುತ್ತಿದ್ದಾರೆ. ಬೆಳೆಯುತ್ತಿರುವ ಜನಸಂಖ್ಯೆಯ ಹಸಿವು ಇಂಗಿಸಲು ವಿಜ್ಞಾನಿಗಳು ರೈತರೊಂದಿಗೆ ಸತತ ಸಂಪರ್ಕ ಇಟ್ಟುಕೊಂಡು, ಕೃಷ್ಯುತ್ಪನ್ನ ಹೆಚ್ಚಳಕ್ಕೆ ಸಂಶೋಧನೆ ನಡೆಸಬೇಕು ಎಂದು ಕರೆ ನೀಡಿದರು.

ಭಾರತದ ಅಭಿವೃದ್ಧಿಗೆ ಎಲ್ಲ ವರ್ಗದ ಜನರ ಶ್ರಮವೂ ಅಗತ್ಯ. ವೈದ್ಯರಿರಲಿ, ವಿದ್ಯಾರ್ಥಿಗಳಿರಲಿ, ಶಿಕ್ಷಕರಿರಲಿ, ಎಂಜಿನಿರ್ ಗಳಿರಲಿ ಯಾರೇ ಆದರೂ ತಮ್ಮ ತಮ್ಮ ಕಾರ್ಯದಲ್ಲಿ ಶ್ರದ್ಧೆ ವಹಿಸಿ, ಪೂರ್ಣ ಸಾಮರ್ಥ್ಯದಿಂದ ಹಾಗೂ ಬದ್ಧತೆಯಿಂದ ಕೆಲಸ ಮಾಡಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

 ಮುಖಪುಟ /ಸುದ್ದಿ ಸಮಾಚಾರ