ಮುಖಪುಟ /ಸುದ್ದಿ ಸಮಾಚಾರ   
      

ವಿದ್ಯಾರ್ಥಿಗಳು ಶಿಕ್ಷಕರು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಮನವಿ

ಬೆಂಗಳೂರು, ಫೆ. ೩: ೪೦ ವರ್ಷಗಳ ಬಳಿಕ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರು ಸಕ್ರಿಯವಾಗಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆಯ ಎಲ್ಲ ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದ್ದಾಗ್ಯೂ ಕೆಲವು ಅನುದಾನ ರಹಿತ ಶಾಲಾ ಕಾಲೇಜುಗಳು ರಜೆ ಘೋಷಿಸದಿರುವ ಬಗ್ಗೆ ದೂರುಗಳು ಬಂದಿದೆ ಇದು ನಿಜಕ್ಕೂ ವಿಷಾದದ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಲ್ಲೂರು ಪ್ರಸಾದ್ ಮನವಿ ಮಾಡಿದ್ದಾರೆ.

ಇಂಥ ಅವಕಾಶಗಳು ಅತ್ಯಂತ ಅಪರೂಪದ್ದಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕನ್ನಡದ ಜಾಗೃತಿ, ಕನ್ನಡಾಭಿಮಾನ ಮೂಡಿಸಲು ಹಾಗೂ ಕನ್ನಡ ಭಾಷೆಯ ಉಳಿವಿಗೆ ಸಮ್ಮೇಳನಗಳು ಅತ್ಯಂತ ಮಹತ್ವದ್ದಾಗಿದ್ದು, ಇಂಥ ಅಮೂಲ್ಯ ಅವಕಾಶದಿಂದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳುವುದು ಪ್ರತಿ ಶಾಲೆ ಕಾಲೇಜಿನ  ಆಡಳಿತ ಮಂಡಳಿಯ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ.

ದೂರುಗಳು ದೃಢಪಟ್ಟಲ್ಲಿ ಅಂಥ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

 ಮುಖಪುಟ /ಸುದ್ದಿ ಸಮಾಚಾರ