ಮುಖಪುಟ /ಸುದ್ದಿ ಸಮಾಚಾರ   
      

ಡಾ.ನಲ್ಲೂರು ಪ್ರಸಾದ್‌ಗೆ ಕಾಯಕರತ್ನ ಪ್ರಶಸ್ತಿ

Nallur Prasad Abhinandaneಬೆಂಗಳೂರು, ಫೆ.೨೨: ಬೆಂಗಳೂರಿನ ಕನ್ನಡ ಅಭಿವೃದ್ಧಿ ಸಂಸ್ಥೆಯು ತನ್ನ ಹತ್ತನೇ ವಾರ್ಷಿಕೋತ್ಸವವನ್ನು ರಾಜ್ಯ ಮಟ್ಟದಲ್ಲಿ "ಕರ್ನಾಟಕ ಸಾಂಸ್ಕೃತಿಕ ವೈಭವ'ವಾಗಿ ಆಚರಿಸಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕದ ನಾಡು-ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಮತ್ತು ಹೋರಾಟಕ್ಕೆ ಸೇವೆಸಲ್ಲಿಸಿರುವ ಗಣ್ಯರನ್ನು ಹಾಗೂ ಪ್ರತಿಭಾವಂತರನ್ನು ಗುರುತಿಸಿ ಕರ್ನಾಟಕ ಕಾಯಕ ರತ್ನ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತಿನ ಅಧ್ಯಕ್ಷರಾದ ಡಾ. ನಲ್ಲೂರು ಪ್ರಸಾದ್ ಅವರಿಗೆ ಕರ್ನಾಟಕ ಕಾಯಕ ರತ್ನ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಡಾ: ನಿಟ್ಟೂರು ಶಾಂತಾರಾಮ ಪ್ರಭು ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ, ಸೈಂಟ್ ಮೇರಿ ವಿದ್ಯಾ ಸಂಸ್ಥೆಗಳ ಸಮೂಹದ ಸಂಸ್ಥಾಪಕ ಕಾರ್ಯದರ್ಶಿ ಜಿ.ಹೆಚ್.ನಾಗರಾಜಯ್ಯ ಶೆಟ್ಟಿ, ಸಂಗೊಳ್ಳಿ ರಾಯಣ್ಣ ಅಭಿವೃದ್ಥಿ ಸಂಘದ ರಾಜ್ಯ ಅಧ್ಯಕ್ಷ ಶೇಖರ್ ವಾಯ್ ಕಾಖಂಡಕಿ ಉಪಸ್ಥಿತರಿದ್ದರು.

 ಮುಖಪುಟ /ಸುದ್ದಿ ಸಮಾಚಾರ