ಮುಖಪುಟ /ಸುದ್ದಿ ಸಮಾಚಾರ   
 

ವೀರಪ್ಪ ಮೊಯ್ಲಿ, ಮುನಿಯಪ್ಪ ವಿರುದ್ಧ ಕರವೇ ಆಕ್ರೋಶ

ಬೆಂಗಳೂರು, ಜೂನ್ 2: ರಾಜ್ಯದ ಎಲ್ಲ ಸಂಸದರೂ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವಂತೆ ಮನವಿ ಮಾಡಿದ್ದರೂ ಆಂಗ್ಲ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿದ ವೀರಪ್ಪ ಮೊಯ್ಲಿ ಹಾಗೂ ಕೆ.ಎಚ್. ಮುನಿಯಪ್ಪ ಅವರ ಧೋರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನ ಮಾನ ದೊರೆತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಸತ್ ಸದಸ್ಯರೂ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವಂತೆ ಕನ್ನಡ ಸಂಘಟನೆಗಳು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಡಿಕೊಂಡಿತ್ತು.

ಕನ್ನಡ ಮರೆತ ಈ ಇಬ್ಬರು ಸಚಿವರ ಧೋರಣೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಷಾದ ವ್ಯಕ್ತಪಡಿಸಿದ್ದಾರೆ.

 

 ಮುಖಪುಟ /ಸುದ್ದಿ ಸಮಾಚಾರ