ಮುಖಪುಟ /ಸುದ್ದಿ ಸಮಾಚಾರ 

 ರಾಜ್ಯಪಾಲರ ಭಾಷಣಕ್ಕೆ ಬಿಎಸ್ ವೈ ಕಿಡಿ

B.S. Yadiyurappaಬೆಂಗಳೂರು, ಜೂ.೩: ರಾಜ್ಯಪಾಲರು ತಮ್ಮ ಭಾಷಣದಲ್ಲಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ, ರಾಜ್ಯದ ಜನತೆ ದೇಶದ ಜನರ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಹೇಳಿಸಿರುವುದ್ದಕ್ಕೆ ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸದನ ಕಲಾಪ ನಾಳೆಗೆ ಮುಂದೂಡಿದ ಬಳಿಕ ವಿಧಾನಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ರಾಜ್ಯಪಾಲರಿಂದ ಭಾಷಣ ಮಾಡಿಸುವುದು ಸೂಕ್ತವಲ್ಲ ಎಂದು ಕಿಡಿಕಾರಿದರು.

ರಾಜ್ಯಪಾಲರು ರಾಜ್ಯದ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸುವ ಬದಲು ಕೇಂದ್ರ ಯುಪಿಎ ಸರ್ಕಾರದಲ್ಲಿ ನಡೆಸಿರುವ ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರ ಹಗರಣಗಳಿಂದ ವಿಶ್ವದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದರೆ ಸೂಕ್ತವಾಗಿರುತ್ತಿತ್ತು ಎಂದು ಹೇಳಿದರು.

ತಮ್ಮ ಆಡಳಿತದ ಅವಧಿಯಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು, ಇಂಥ ಅಂಶಗಳು ಗೋಚರಿಸಲ್ಲ. ಅದರ ಬದಲು ಅಲ್ಪತನದಿಂದ ರಾಜ್ಯಪಾಲರ ಬಾಯಲ್ಲಿ ಇಂಥ ಹೇಳಿಕೆ ಕೊಡಿಸಿರುವ ಸರ್ಕಾರದ ಧೋರಣೆ ಸರಿಯಿಲ್ಲ ಎಂದರು.

 ಮುಖಪುಟ /ಸುದ್ದಿ ಸಮಾಚಾರ