ಮುಖಪುಟ /ಸುದ್ದಿ ಸಮಾಚಾರ 

ಹೈದ್ರಾಬಾದ್ ಕರ್ನಾಟಕ- ಸಮಿತಿ ರಚನೆ

ಬೆಂಗಳೂರುಜೂನ್ ೧೦: ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಅನುಚ್ಛೇದ -೩೭೧ ಜೆ ಯನ್ನು ಜಾರಿಗೊಳಿಸುವ ಸಂಬಂಧದ ಆದೇಶಗಳನ್ನು ಪರಿಶೀಲಿಸಲು ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದ್ದು, ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಕೊನೆಗೂ ಚಾಲನೆ ಸಿಕ್ಕಿದೆ.

ರಾಜ್ಯ ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್  ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ  ಸರ್ಕಾರ  ಇಂದು ಅಧಿಕೃತ ಆದೇಶ ಹೊರಡಿಸಿದೆ. 

ಪೌರಾಡಳಿತ, ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆಗಳು, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರುಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪಶುಸಂಗೋಪನೆ ಸಚಿವರು, ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ರಾಜ್ಯ ಸಚಿವರು, ಕಾರ್ಮಿಕ ಇಲಾಖಾ ರಾಜ್ಯ ಸಚಿವರುಗಳು ಸಮಿತಿಯ ಸದಸ್ಯರುಗಳಾಗಿರುತ್ತಾರೆ.   

 ಮುಖಪುಟ /ಸುದ್ದಿ ಸಮಾಚಾರ