ಮುಖಪುಟ /ಸುದ್ದಿ ಸಮಾಚಾರ   
 

ಚಿತ್ರರಂಗ ಮಹೋನ್ನತವಾಗಿ ಬೆಳಗಬೇಕು ಯಡಿಯೂರಪ್ಪ

ಕನ್ನಡಚಲನಚಿತ್ರ ಅಮೃತ ಮಹೋತ್ಸವ ಸಮಾರಂಭ, ಅರಮನೆ ಆವರಣ, ಬೆಂಗಳೂರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಚಾಲನೆ.ಬೆಂಗಳೂರು, ಮಾ.1 : ರಾಜ್ಯ ಸರ್ಕಾರ ನೀಡುತ್ತಿರುವ ಕೊಡುಗೆಗಳನ್ನು ಸದ್ಬಳಕೆ ಮಾಡಿಕೊಂಡು ಕನ್ನಡ ಚಿತ್ರರಂಗ ಮಹೋನ್ನತವಾಗಿ ಬೆಳೆಯಬೇಕು, ಬೆಳಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಗಳೂರು ಅರಮನೆ ಆವರಣದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಕನ್ನಡ ವಾಕ್ ಚಿತ್ರರಂಗದ ಅಮೃತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಬೆಂಗಳೂರಿನಲ್ಲಿ ಅಮೃತ ಮಹೋತ್ಸವ ಭವನ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ನೀಡುವ ವಾಗ್ದಾನ ನೀಡಿದರು. ಸದಬಿರುಚಿಯ 50 ಕನ್ನಡ ಚಿತ್ರಗಳಿಗೆ ಪ್ರತಿವರ್ಷ  10 ಲಕ್ಷ ರೂಪಾಯಿ ಅನುದಾನ ನೀಡಲು ಎರಡು ಕೋಟಿ ರೂಪಾಯಿ ಹೆಚ್ಚುವರಿಯಾಗಿ ಒದಗಿಸುವುದಾಗಿ ಹೇಳಿದರು.

ಕನ್ನಡ ಚಿತ್ರರಂಗದ ಏಳಿಗೆಗೆ ದುಡಿದ ಹಿರಿಯರ ಸೇವೆಯನ್ನು ಸ್ಮರಿಸಿದ ಅವರು, ಕಲೆ, ಸಂಸ್ಕೃತಿ ನಾಡಿನ ಆಸ್ತಿ. ಕಲೆಯನ್ನು ಪೋಷಿಸಬೇಕಾದ್ದು ಸರ್ಕಾರದ ಕರ್ತವ್ಯ. ರಾಜ್ಯ ಸರ್ಕಾರ ಆ ಕಾರ್ಯವನ್ನು ಮಾಡುತ್ತಿದೆ. ಬಜೆಟ್ ನಲ್ಲಿ ಚಿತ್ರರಂಗಕ್ಕೆ ಸಾಕಷ್ಟು ಪ್ರೋತ್ಸಾಹ ನೀಡಿದೆ ಎಂದರು.

ಕನ್ನಡಚಲನಚಿತ್ರ ಅಮೃತ ಮಹೋತ್ಸವ ಸಮಾರಂಭ, ಅರಮನೆ ಆವರಣ, ಬೆಂಗಳೂರು, ಕಮಲಹಾಸನ್ದಕ್ಷಿಣ ಭಾರತದ ಖ್ಯಾತ ನಟ ಕಮಲಹಾಸನ್ ಕನ್ನಡದಲ್ಲಿ ತಮ್ಮ ಭಾಷಣ ಮಾಡಿ, ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಕಲಾವಿದರಿಗೆ ಭಾಷೆ ಇಲ್ಲ. ಆದರೆ, ರಾಜಕೀಯ ಲಾಭಕ್ಕಾಗಿ ಕಲೆಯನ್ನು ಕಲಾವಿದರನ್ನು ಒಡೆಯುವುದು ಸಲ್ಲ ಎಂದರು.

ಚಿತ್ರನಟರಾದ ವಿಷ್ಣುವರ್ಧನ್, ಬಿ. ಸರೋಜಾದೇವಿ, ಅಂಬರೀಶ್, ಶ್ರೀನಾಥ್, ಮುಖ್ಯಮಂತ್ರಿ ಚಂದ್ರು, ಸಚಿವರಾದ ಶೋಭಾ ಕರಂದ್ಲಾಜೆ, ಜನಾರ್ದನ ರೆಡ್ಡಿ, ಆರ್. ಅಶೋಕ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತಿತರರು ಪಾಲ್ಗೊಂಡಿದ್ದರು.

 ಮುಖಪುಟ /ಸುದ್ದಿ ಸಮಾಚಾರ