ಮುಖಪುಟ /ಸುದ್ದಿ ಸಮಾಚಾರ   
 

ಕೇಂದ್ರ ಸಂಪುಟದಲ್ಲಿ ರಾಜ್ಯದ ಇಬ್ಬರು

SMKನವದೆಹಲಿ, ಮೇ22:  ಇಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಇಬ್ಬರು ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ.

ಪ್ರಧಾನಿ ಬಳಿಕ, ಐದನೆಯವರಾಗಿ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯ ಎಸ್. ಎಂ. ಕೃಷ್ಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜಯಸಾಧಿಸಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ  10ನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಚ್. ವಿಶ್ವನಾಥ್, ಆಸ್ಕರ್ ಫರ್ನಾಂಡಿಸ್ ಮೊದಲ ಹಂತದಲ್ಲಿ ಮಂತ್ರಿಗಿರಿ ಗಿಟ್ಟಿಸುವಲ್ಲಿ ವಿಫಲರಾಗಿದ್ದಾರೆ.

ಸಮಾರಂಭದಲ್ಲಿ ಯು.ಪಿ.ಎ. ಅಧ್ಯಕ್ಷೆ ಸೋನಿಯಾಗಾಂಧಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ಉಪ ರಾಷ್ಟ್ರಪತಿ ಶೇಖಾವತ್, ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ,  ಮಾಜಿ ಸಚಿವರಾದ ಲಾಲೂ ಪ್ರಸಾದ್ ಯಾದವ್, ರಾಮವಿಲಾಸ್ ಪಾಸ್ವಾನ್, ಎಡಪಕ್ಷದ ನಾಯಕರಾದ ಸೀತಾರಾಂ ಯಚೂರಿ, ಆಂಧ್ರದ ಮುಖ್ಯಮಂತ್ರಿ ರಾಜಶೇಖರ ರೆಡ್ಡಿ, ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ರಾಜ್ಯದ ರಾಜ್ಯಪಾಲ ರಾಮೇಶ್ವರ ಠಾಕೂರ್ ಮತ್ತಿತರರು ಪಾಲ್ಗೊಂಡಿದ್ದರು.

 ಮುಖಪುಟ /ಸುದ್ದಿ ಸಮಾಚಾರ