ಮುಖಪುಟ /ಸುದ್ದಿ ಸಮಾಚಾರ   
 

ಶೀಘ್ರವೇ ರಾಜ್ಯ ಸಚಿವ ಸಂಪುಟ ಪುನಾರಚನೆ ಯಡಿಯೂರಪ್ಪ

Yedeyurappaಬೆಂಗಳೂರು, ಮೇ 25:  ರಾಜ್ಯ ಸಚಿವ ಸಂಪುಟವನ್ನು ಶೀಘ್ರವೇ ಪುನಾರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಹಿರಂಗವಾಗಿಯೇ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡುವಂತೆ ಮಾಡಿದ್ದಾರೆ.

ಬೆಂಗಳೂರು ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ನಗರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಬೆಂಗಳೂರು ನಗರದ ಸೌಂದರ್ಯ ಕಾಪಾಡಲು ನಾಲ್ಕೂ ಕಡೆ ಮಿನಿ ಲಾಲ್ ಬಾಗ್ ನಿರ್ಮಿಸಲಾಗುವುದು. ಬಡಾವಣೆಗೊಂದು ಉದ್ಯಾನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು.

ತಾವು ಯಾವುದೇ ಸಚಿವರ ಚಲನವಲನಗಳ ಬಗ್ಗೆ ನಿಗಾ ಇಡಲು ಗುಪ್ತಚರ ವಿಭಾಗದ ಪೊಲೀಸರಿಗೆ ಸೂಚಿಸಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ, ಯಾವುದೇ ಸಚಿವರ ವೈಯಕ್ತಿಕ ಪ್ರಗತಿ ಪರಿಶೀಲನೆ ಮಾಡುವುದಿಲ್ಲ. ಆದರೆ, ಇಲಾಖೆಯ ಪ್ರಗತಿ ಪರಿಶೀಲಿಸುವ ಚಿಂತನೆ ಸರ್ಕಾರಕ್ಕಿದೆ ಎಂದು ಹೇಳಿದರು.

 ಮುಖಪುಟ /ಸುದ್ದಿ ಸಮಾಚಾರ