ಮುಖಪುಟ /ಸುದ್ದಿ ಸಮಾಚಾರ   
 

ಕೇಂದ್ರ ಸಂಪುಟದಲ್ಲಿ ರಾಜ್ಯದ ಮತ್ತಿಬ್ಬರಿಗೆ ಸಚಿವ ಸ್ಥಾನ ಸಾಧ್ಯತೆ

ನವದೆಹಲಿ, ಮೇ 25: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಕೇವಲ 6 ಸ್ಥಾನಗಳಲ್ಲಿ ಮಾತ್ರ ಗೆದ್ದಿದ್ದರೂ  ಕೇಂದ್ರದ ಯು.ಪಿ.ಎ. ಸರ್ಕಾರದಲ್ಲಿ ರಾಜ್ಯಕ್ಕೆ 5 ಸಚಿವ ಸ್ಥಾನ ದೊರಕುವ ಸಾಧ್ಯತೆ ಇದೆ.

22ರಂದು ಯು.ಪಿ.ಎ. ಅಧಿಕಾರದ ಚುಕ್ಕಾಣಿ ಹಿಡಿದಾಗ ಪ್ರಧಾನಿ ಡಾ.ಮನಮೋಹನಸಿಂಗ್ ಅವರೊಂದಿಗೆ ರಾಜ್ಯದ ಹಿರಿಯ ನಾಯಕರಾದ ಎಸ್.ಎಂ.ಕೃಷ್ಣ ಹಾಗೂ ವೀರಪ್ಪ ಮೊಯ್ಲಿ ಸಚಿವರಾಗಿ ಸೇರ್ಪಡೆಯಾಗಿದ್ದರು.

ನಾಳೆ ನಡೆಯಲಿರುವ ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ 60 ನೂತನ ಸಚಿವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದು, ರಾಜ್ಯದ ಸಂಸದರಾದ ಕೆ.ಎಚ್. ಮುನಿಯಪ್ಪ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಚಿವರಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ರಾಜ್ಯ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ಇನ್ನೂ ಐವರು ಸಚಿವರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಮುಖಪುಟ /ಸುದ್ದಿ ಸಮಾಚಾರ