ಮುಖಪುಟ /ಸುದ್ದಿ ಸಮಾಚಾರ   
 

ಡಾ||ಮನಮೋಹನ್ ಸಂಪುಟದಲ್ಲಿ ರಾಜ್ಯದ ಐವರು

ಬೆಂಗಳೂರು, ಮೇ 29 : ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನಸಿಂಗ್ ಅವರ ನೇತೃತ್ವದ ಕೇಂದ್ರ ಯು.ಪಿ.ಎ. ಸಚಿವ ಸಂಪುಟದಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಲಾಗಿದೆ.

28 ಲೋಕಸಭಾ ಕ್ಷೇತ್ರಗಳ ಪೈಕಿ ಕೇವಲ 6 ಕ್ಷೇತ್ರಗಳಲ್ಲಿ ಮಾತ್ರವೇ ಕಾಂಗೆಸ್ ಜಯ ಸಾಧಿಸಿದ್ದರೂ ಕೇಂದ್ರ ಸಂಪುಟದಲ್ಲಿ ರಾಜ್ಯದ ಐವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕರ್ನಾಟಕಕ್ಕೆ ಮನ್ನಣೆ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಹಾಗೂ ಎಂ. ವೀರಪ್ಪ ಮೊಯ್ಲಿ ಅವರು, ಪ್ರಧಾನಿಯವರೊಂದಿಗೆ ಮೊದಲ ಹಂತದಲ್ಲೇ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಈಗ ಮೇ 28ರಂದು ನಡೆದ ಪ್ರಥಮ ಹಂತದ ಸಂಪುಟ ವಿಸ್ತರಣೆ ವೇಳೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ ಹಾಗೂ ಕರ್ನಾಟಕ ಮೂಲದ ಜೈರಾಮ್ ರಮೇಶ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. 

 ಮುಖಪುಟ /ಸುದ್ದಿ ಸಮಾಚಾರ