ಮುಖಪುಟ /ಸುದ್ದಿ ಸಮಾಚಾರ   
 

ಮಾಜಿ ಮುಖ್ಯಮಂತ್ರಿಗಳ ಭವಿಷ್ಯವೀಗ ಮತಯಂತ್ರಗಳಲ್ಲಿ ಭದ್ರ

ಬೆಂಗಳೂರು : ಈ ಬಾರಿಯ ಸಾರ್ವತ್ರಿಕ ಚುನಾವಣೆ ರಾಜ್ಯದಲ್ಲಿ ಹಲವು ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಪ್ರಧಾನಿ, ಹಾಲಿ-ಮಾಜಿ ಸಚಿವರು, ಶಾಸಕರು, ಸಂಸದರು ಮತ್ತು ಐವರು ಮಾಜಿ ಮುಖ್ಯಮಂತ್ರಿಗಳ ಸ್ಪರ್ಧೆಯಿಂದಾಗಿ ರಾಜ್ಯದ ಹಲವು ಕ್ಷೇತ್ರಗಳು ರಾಷ್ಟ್ರದ ಗಮನ ಸೆಳೆದಿವೆ.

ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಸ್ಪರ್ಧೆಗಳಿದಿದ್ದರೆ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಆಡಳಿತ ಸುಧಾರಣಾ ಆಯೋಗದ ಮಾಜಿ ಅಧ್ಯಕ್ಷ ಎಂ. ವೀರಪ್ಪ ಮೊಯ್ಲಿ ತಮ್ಮದಲ್ಲದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.

ಕಾಂಗ್ರೆಸ್ ತೊರೆದು ಸ್ವಂತ ಪಕ್ಷ ಕಟ್ಟಿ, ನಂತರ ಬಿಜೆಪಿಗೆ ಹಾರಿ,  ಬಿಜೆಪಿಯನ್ನೂ ಬಿಟ್ಟು ಎಸ್.ಪಿ. ಸೇರಿ ಸಂಸದರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಸಮಾಜವಾದಿ ಪಕ್ಷ ತೊರೆದು ಮತ್ತೆ ಕಾಂಗ್ರೆಸ್ ಗೆ ಮರಳಿದ್ದು,  ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ.

 ಮುಖಪುಟ /ಸುದ್ದಿ ಸಮಾಚಾರ