ಮುಖಪುಟ /ಸುದ್ದಿ ಸಮಾಚಾರ 

ಜಗದೀಶ ಶೆಟ್ಟರ್ ರಾಜೀನಾಮೆ

jagadesh shettarಬೆಂಗಳೂರು, ಮೇ ೮: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ, ನೂತನ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಲು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಇಂದು ಸಂಜೆ ೬.೩೦ರ ವೇಳೆಗೆ ರಾಜಭವನಕ್ಕೆ ತೆರಳಿದ  ಅವರು, ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದರು.

ಶೆಟ್ಟರ್ ಅವರಿಂದ ರಾಜಿನಾಮೆ ಪತ್ರ ಸ್ವೀಕರಿಸಿದ ರಾಜ್ಯಪಾಲರು, ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸೂಚಿಸಿದರು.

ಬಳಿಕ ರಾಜಭವನದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯದ ನಡುವೆಯೂ ಅಪಪ್ರಚಾರದಿಂದ ಸೋಲನುಭವಿಸಿತು ಎಂದರು.

ಈ ಫಲಿತಾಂಶ ಅನಿರೀಕ್ಷಿತವಾಗಿದ್ದು, ಕರ್ನಾಟಕ ಜನತೆಯ ತೀರ್ಪಿಗೆ ತಲೆಬಾಗುತ್ತೇವೆ. ಜನತೆಯ ಆದೇಶಕ್ಕೆ ತಲೆ ಬಾಗಿ ನಾವು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು, ಪ್ರಮಾಣಿಕವಾಗಿ ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ ಎಂದು ಹೇಳಿದರು.

 

 

ಮುಖಪುಟ /ಸುದ್ದಿ ಸಮಾಚಾರ