ಮುಖಪುಟ /ಸುದ್ದಿ ಸಮಾಚಾರ 

 ಶುದ್ಧ, ಭ್ರಷ್ಟಾಚಾರ ಮುಕ್ತ ಸರ್ಕಾರ

ಭಾವೀ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

siddaramaiahಬೆಂಗಳೂರು, ಮೇ ೧೦:-   ರಾಜ್ಯದಲ್ಲಿ ಪಾರದರ್ಶಕ, ಸ್ಥಿರ, ಸ್ವಚ್ಛ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಾಧ್ಯಮಗಳಲ್ಲಿ ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂಬ ಚರ್ಚೆ ನಡೆದಿತ್ತು, ಆದರೆ ರಾಜ್ಯದ ಜನತೆ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಸೇವೆ ಸಲ್ಲಿಸುತ್ತೇನೆ ಎಂದರು.

ಶಾಸಕಾಂಗ ಪಕ್ಷದ ನಾಯಕನಾಗಿ ತಮ್ಮನ್ನು ಆಯ್ಕೆ ಮಾಡಿದ ಪಕ್ಷದ ಅಧಿನಾಯಕಿ, ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‌ಗಾಂಧಿ ಹಾಗೂ ಬೆಂಬಲ ನೀಡಿದ ೧೨೦ ಶಾಸಕರಿಗೂ ಕೃತಜ್ಞತೆ ಸಲ್ಲಿಸಿದರು.

ನಾಳೆ ದೆಹಲಿಗೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ನಾಳೆಯೇ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಅವರಿಗೆ ಕೃತಜ್ಞತೆ ಸಲ್ಲಿಸಲಿದ್ದು, ನೂತನ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ಮುಖಪುಟ /ಸುದ್ದಿ ಸಮಾಚಾರ