ಮುಖಪುಟ /ಸುದ್ದಿ ಸಮಾಚಾರ   
 

ಅಂಬರೀಶ್ ಗೆ ಎನ್.ಟಿ.ರಾಮರಾವ್ ಪ್ರಶಸ್ತಿ ಪ್ರದಾನ

ಪ್ರತಿಷ್ಠಿತ ಎನ್.ಟಿ.ರಾಮರಾವ್ ಪ್ರಶಸ್ತಿಗೆ ಭಾಜನರಾದ ಚಿತ್ರನಟ ಹಾಗೂ ಸಂಸತ್ ಸದಸ್ಯ ಅಂಬರೀಶ್ ಅವರಿಗೆ ನ.16ರ ಭಾನುವಾರ ಹೈದರಾಬಾದ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತೆಲುಗಿನ ಖ್ಯಾತ ನಾಯಕ ನಟ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎನ್.ಟಿ.ರಾಮರಾವ್ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಂಬರೀಶ್ ಈ ಪ್ರಶಸ್ತಿ ದೇಶದ ಭಾವೈಕ್ಯತೆಯನ್ನು ಉತ್ತೇಜಿಸುತ್ತದೆ ಎಂದರು.

ಈ ಹಿಂದೆ ಡಾ. ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗಿತ್ತು. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಮುಖಪುಟ /ಸುದ್ದಿ ಸಮಾಚಾರ