ಮುಖಪುಟ /ಸುದ್ದಿ ಸಮಾಚಾರ   
 

ಸಿ.ಇ.ಟಿ. ರದ್ದು ಮಾಡಲು ಸರ್ಕಾರದ ಚಿಂತನೆ

ಬೆಂಗಳೂರು, ನ.25: ರಾಜ್ಯದಲ್ಲಿ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣ ಪ್ರವೇಶಕ್ಕೆ ಈಗ ಇರುವ ಸಿ.ಇ.ಟಿ. ಪರೀಕ್ಷಾ ವ್ಯವಸ್ಥೆ ದ್ದುಪಡಿಸುವ ಬಗ್ಗೆ ಸರ್ಕಾರ ತೀವ್ರ ಪರಿಶೀಲನೆ ನಡೆಸುತ್ತಿದೆ ಎಂದು ಸಚಿವ ರಾಮಚಂದ್ರಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಬಗ್ಗೆ ತಮಗಿರುವ ತೊಂದರೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ, ಅಲ್ಲದೆ ಸರ್ಕಾರದ ಶಿಕ್ಷಣ ಇಲಾಖೆ ವತಿಯಿಂದಲೇ ನಡೆಯುವ  ಪಿ.ಯು.ಸಿ. ಪರೀಕ್ಷೆಗಳ ಬಗ್ಗೆ ನಂಬಿಕೆ ಇಲ್ಲವೇ. ಹೀಗಿರುವಾಗ ಸಿ.ಇ.ಟಿ. ಏಕೆ ಬೇಕು ಎಂಬ ಪ್ರಶ್ನೆಯನ್ನು ಪಾಲಕರು ಕೇಳುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಸಿಇಟಿ ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.

ಮುಖಪುಟ /ಸುದ್ದಿ ಸಮಾಚಾರ