ಮುಖಪುಟ /ಸುದ್ದಿ ಸಮಾಚಾರ   
 

ಗೋಗಟೆ ಇಂಜನೀಯರಿಂಗ್ ಕಾಲೇಜಿನಲ್ಲಿ ಅಂತರ್ಜಾಲ ಪ್ರಪಂಚ

ಬೆಳಗಾವಿನ. ೫: ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅಂತರ್‌ಜಾಲ ಪ್ರಪಂಚ ೨೦೦೭ ಕಾರ್ಯಕ್ರಮವನ್ನು ಇದೇ ನವೆಂಬರ್ ೬ ರಿಂದ ೮ ರವರೆಗೆ ಜಿಐಟಿ. ಇಂಜನೀಯರಿಂಗ್ ಕಾಲೇಜ ಹಾಗೂ ಕೆಎಲ್‌ಇ ಇಂಜನೀಯರಿಂಗ್ ಕಾಲೇಜಗಳಲ್ಲಿ ಹಮ್ಮಿಕೊಳ್ಳಲಾಗಿದೆ.

   ಈ ಕಾರ್ಯಕ್ರಮ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬೆಳಗಾವಿ, ಬೈಲಹೊಂಗಲ, ಖಾನಾಪೂರ, ರಾಮದುರ್ಗ, ಸವದತ್ತಿ, ಗೋಕಾಕ, ಮೂಡಲಗಿ ಹಾಗೂ ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಶಾಲೆಗಳ ಒಟ್ಟು ೨೯೬೦ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲಿದ್ದಾರೆ.

    ಇಂಟರ್‌ನೆಟ್ ಬಗ್ಗೆ ಪರಿಚಯ ಹಾಗೂ ಅದರ ಬಳಕೆಯಿಂದಾಗುವ ಪ್ರಯೋಜನ ಬಗ್ಗೆ ತಿಳಿಸಿಕೊಡುವ ಈ ಕಾರ್ಯಕ್ರಮಕ್ಕೆ ಎಲ್ಲ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗಿದ್ದು, ಕಾರ್ಯಕ್ರಮವನ್ನು ಜಿ.ಐ.ಟಿ. ಇಂಜನೀಯರಿಂಗ್ ಕಾಲೇಜಿನಲ್ಲಿ ನವೆಂಬರ್ ೬ ರಂದು ಬೆಳಿಗ್ಗೆ ೯-೩೦ ಗಂಟೆಗೆ ಜಿಲ್ಲಾಧಿಕಾರಿ ಡಾ|| ಜೆ. ರವಿಶಂಕರ ಅವರು ಸಾಂಕೇತಿಕವಾಗಿ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭವು ನವೆಂಬರ್ ೮ ರಂದು ಸಂಜೆ ೪-೩೦ ಕ್ಕೆ ಕೆಎಲ್‌ಇ ಇಂಜನೀಯರಿಂಗ್ ಕಾಲೇಜಿನಲ್ಲಿ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಮುಖ್ಯೋಪಾಧ್ಯಾಯರುಗಳಿಗೆ, ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ. ಎಸ್. ಜಯಕುಮಾರ ಅವರು ತಿಳಿಸಿದ್ದಾರೆ.

ಮುಖಪುಟ /ಸುದ್ದಿ ಸಮಾಚಾರ