ಮುಖಪುಟ /ಸುದ್ದಿ ಸಮಾಚಾರ   


ಕಾಂಗ್ರೆಸ್ ಗೆ ಸಿದ್ಧರಾಮಯ್ಯ ಪರೋಕ್ಷ ಎಚ್ಚರಿಕೆ

ಬೆಂಗಳೂರು : ಯಾವುದೇ ಹಂತದಲ್ಲಿ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಪಕ್ಷ ಕೈಜೋಡಿಸಿದರೆ ತಾವು ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ ಕಡಿದುಕೊಳ್ಳುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ಕಡಿಗಣಿಸಲಾಗುತ್ತಿದೆಯಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದರು.

ತಾವಿನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದಾಗಿ ಅವರು ಸ್ಪಷ್ಟಪಡಿಸಿದರು. ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ಹೇಳಿದರು.

ಪಕ್ಷದ ಎಲ್ಲ ರಾಜಕೀಯ ಬೆಳವಣಿಗೆ ಹಾಗೂ ಎಲ್ಲ ವಿಧ್ಯಮಾನಗಳ ಬಗ್ಗೆಯೂ ತಮಗೆ ಅರಿವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿ.ಕೆ.ಶಿವಕುಮಾರ್ ಅವರೊಂದಿಗಿನ ಭೇಟಿ ವೇಳೆ  ಜೆಡಿಎಸ್ ಜೊತೆ ಯಾವುದೇ ಮೈತ್ರಿ ಬೇಡ ಎಂದು ಅವರು ಅಂತಿಮ ಎಚ್ಚರಿಕೆ ನೀಡಿದ್ದಾಗಿ ಮೂಲಗಳು ತಿಳಿವೆ.

ಮುಖಪುಟ /ಸುದ್ದಿ ಸಮಾಚಾರ