ಮುಖಪುಟ /ಸುದ್ದಿ ಸಮಾಚಾರ   
 

ಕೇಂದ್ರ ನಗರಾಭಿವೃದ್ಧಿ ಸಚಿವರ ಜೊತೆ ಸುರೇಶ್‌ಕುಮಾರ್ ಭೇಟಿ

ಬೆಂಗಳೂರು ನವೆಂಬರ್ 25: ನಗರಾಭಿವೃದ್ಧಿ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಎಸ್. ಸುರೇಶ್‌ಕುಮಾರ್ ಅವರು ನಾಳೆ ಕೇಂದ್ರ ನಗರಾಭಿವೃದ್ಧಿ ಸಚಿವ           ಶ್ರೀ ಜೈಪಾಲ್‌ರೆಡ್ಡಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಕರ್ನಾಟಕದಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ವಿಷಯಗಳನನ್ನು ಚರ್ಚಿಸಲಿದ್ದಾರೆ.

ಕೇಂದ್ರ ಸರ್ಕಾರದ ನೆರವಿನೊಂದಿಗೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ನರ್ಮ್ ಯೋಜನೆಯ ಬಾಕಿಯಿರುವ ಹಣವನ್ನು ಬಿಡುಗಡೆ ಮಾಡುವಂತೆ ಮತ್ತು ರಾಜ್ಯಕ್ಕೆ ಹೆಚ್ಚು ಯೋಜನೆಗಳನ್ನು ಮಂಜೂರು ಮಾಡುವಂತೆ ಸಚಿವರು ಈ ಸಂದರ್ಭದಲ್ಲಿ ಕೋರಲಿದ್ದಾರೆ.  ಈಗಾಗಲೇ  ರಾಜ್ಯದಿಂದ ೫೦ ಯೋಜನೆಗಳನ್ನು ನರ್ಮ್ ಕಾರ್ಯಕ್ರಮದಡಿ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ.  ನಾಳಿನ ಭೇಟಿಯ ಸಂದರ್ಭದಲ್ಲಿ ಈ ಯೋಜನೆಗಳನ್ನು ಮಂಜೂರು ಮಾಡುವಂತೆ ಸಚಿವ ಸುರೇಶ್‌ಕುಮಾರ್ ಒತ್ತಾಯಿಸಲಿದ್ದಾರೆ.  ನಗರಾಭಿವೃದ್ಧಿ ಇಲಾಖೆಯ ಉನ್ನತಾಧಿಕಾರಿಗಳು ಈ ಸಂದರ್ಭದಲ್ಲಿ ಸಚಿವರ ಜೊತೆ ದೆಹಲಿಗೆ ತೆರಳಲಿದ್ದಾರೆ.

ಮುಖಪುಟ /ಸುದ್ದಿ ಸಮಾಚಾರ