ಮುಖಪುಟ /ಸುದ್ದಿ ಸಮಾಚಾರ   
 

ಮಧ್ಯಂತರ ಚುನಾವಣೆಗೆ ಸಜ್ಜಾಗಿ - ಕುಮಾರಸ್ವಾಮಿ

H.D.Kumaraswamyಬೆಂಗಳೂರು, ನ.18:ರಾಜ್ಯದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರಲಿದ್ದು, ಕಾರ್ಯಕರ್ತರು ಸಜ್ಜಾಗಬೇಕು ಎಂದು ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿ ಇಂದು ಮರು ಆಯ್ಕೆಯಾದ ಬಳಿಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅವರು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ನಾಯಕರು ಕಾರ್ಯಕರ್ತರ ಜತೆ ಸಮನ್ವಯ ಕಾಪಾಡಿಕೊಂಡು ಎಲ್ಲ ಹಂತದಲ್ಲಿಯೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷವನ್ನು ನಾವು ದುರ್ಬಲಗೊಳಿಸುತ್ತಿಲ್ಲ, ಬದಲಿಗೆ ಆ ಪಕ್ಷದವರೇ ಪಕ್ಷವನ್ನು ದುರ್ಬಲ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಶೇಕಡ 7೦ ರಷ್ಟು ಮಹಿಳೆಯರಿಗೆ ಸ್ಥಾನಗಳನ್ನು ಮೀಸಲಿಡುವುದಾಗಿ ಅವರು ಹೇಳಿದರು.

 ಮುಖಪುಟ /ಸುದ್ದಿ ಸಮಾಚಾರ