ಮುಖಪುಟ /ಸುದ್ದಿ ಸಮಾಚಾರ   
 

ಕರ್ನಾಟಕ ರಾಜ್ಯಪಾಲರಾಗಿ ರೋಸಯ್ಯ?

ನವದೆಹಲಿ, ನ.24:ತಮಗೆ ಮಗ್ಗುಲ ಮುಳ್ಳಾಗಿ ನಿತ್ಯ ಕಾಡುತ್ತಿರುವ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರ ಜಗನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹೈಕಮಾಂಡ್ ವಿರುದ್ಧ ರೋಸತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ರೋಸಯ್ಯ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಗೊತ್ತಾಗಿದೆ..

ವಿವಾದದ ಕೇಂದ್ರ ಬಿಂದುವಾಗಿರುವ ಹಂಸರಾಜ್ ಭಾರದ್ವಾಜ್ ಅವರ ಸ್ಥಾನದಲ್ಲಿ ರೋಸಯ್ಯ ಅವರನ್ನು ಕರ್ನಾಟಕ ರಾಜ್ಯಪಾಲರನ್ನಾಗಿ ಕಳುಹಿಸಲಾಗುತ್ತದೆ ಎಂಬ ಸುದ್ದಿಗಳೂ ದಟ್ಟವಾಗಿವೆ. ಒಂದೆರೆಡು ದಿನಗಳಲ್ಲೇ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರಕುವ ಸಾಧ್ಯತೆ ಇದೆ.

ರೋಸಯ್ಯ ಅವರು ಪಕ್ಷದ ಹೈಕಮಾಂಡ್ ನಿರ್ದೇಶನದ ಮೇರೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಅವರು ಇಂದು ಸುದ್ದಿಗೋಷ್ಠಿಯಲ್ಲಿ ತಮ್ಮ ವೈಯಕ್ತಿಕ ಕಾರಣಗಳಿಗಾಗಿ ತಾವು ಮುಖ್ಯಮಂತ್ರಿ ಹುದ್ದೆ ತೊರೆಯುತ್ತಿರುವುದಾಗಿ ಪ್ರಕಟಿಸಿದರು.

ಈ ಮಧ್ಯೆ ಕೇಂದ್ರ ಕಾನೂನು ಸಚಿವ ಎಂ. ವೀರಪ್ಪ ಮೊಯ್ಲಿ ಸಹ ರೋಸಯ್ಯ ಅವರು ತಮ್ಮ ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದಾರೆ. ಆಂಧ್ರಪ್ರದೇಶದಲ್ಲಿ ಸರ್ಕಾರ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

 

 ಮುಖಪುಟ /ಸುದ್ದಿ ಸಮಾಚಾರ