ಮುಖಪುಟ /ಸುದ್ದಿ ಸಮಾಚಾರ   
 

ಶೀಘ್ರವೇ ಸಂಪುಟ ಪುನಾರಚನೆ

K.S. Eswarappaಬೆಂಗಳೂರು, ಸೆ.16 -ರಾಜ್ಯದಲ್ಲಿ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಸರ್ಕಾರ ಸಂಪೂರ್ಣ ಸುಭದ್ರವಾಗಿದೆ. ಸುಭದ್ರವಾಗಿಯೇ ಇರುತ್ತದೆ. ತನ್ನ ಅಧಿಕಾರಾವಧಿಯನ್ನು ಯಶಸ್ವಿಯಾಗಿಯೇ ಪೂರೈಸುತ್ತದೆ ಎಂದು ಹೇಳಿದ ಈಶ್ವರಪ್ಪ, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಇನ್ನಷ್ಟು ಬಲ ತುಂಬಲು, ಸಂಪುಟ ಪುನಾರಚನೆ ಮಾಡಲು ತೀರ್ಮಾನಿಸಲಾಗಿದೆ.

ಪ್ರಸಕ್ತ ಸಂಪುಟದಲ್ಲಿರುವ ಕೆಲವರನ್ನು ಪಕ್ಷದ ಬಲವರ್ಧನೆಗಾಗಿ ಬಳಸಿಕೊಳ್ಳಲು ಹಾಗೂ ಪಕ್ಷದ ಹಿರಿಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಮಾತುಕತೆಗಳು ನಡೆಯುತ್ತಿದೆ. ಮುಖ್ಯಮಂತ್ರಿಗಳು ವಿದೇಶದಿಂದ ಹಿಂತಿರುಗಿದ ಬಳಿಕ ಅವರೊಂದಿಗೆ ಮೊದಲು ಮಾತುಕತೆ ನಡೆಸಿ, ಸಂಪುಟ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಕ್ಷದ ಸಂಘಟನೆಗೆ ಹಾಗೂ ಸರ್ಕಾರದ ಬಲವರ್ಧನೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಅಶಿಸ್ತು ಸಹಿಸುವುದಿಲ್ಲ ಎಂದು ಅಪಸ್ವರ ತೆಗೆದಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಯಾರ ಹೆಸರನ್ನೂ ಹೇಳದೆ ಎಚ್ಚರಿಕೆ ನೀಡಿದರು.

 ಮುಖಪುಟ /ಸುದ್ದಿ ಸಮಾಚಾರ