ಮುಖಪುಟ /ಸುದ್ದಿ ಸಮಾಚಾರ   
 

ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Siddaramaiahಬೆಂಗಳೂರು, ಸೆ.೧೬- ರಾಜ್ಯದ ಜನತೆಯ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಗುಲ್ಬರ್ಗಾ ದಕ್ಷಿಣ ಹಾಗೂ ಕಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಪ್ರತಿಷ್ಠೆಯನ್ನು ಪಣಕ್ಕಿಟ್ಟು ಹೋರಾಡಿದ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದ್ದು, ಸೋಲಿನ ನೈತಿಕ ಹೊಣೆಹೊತ್ತು ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ  ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಪತ್ರ ಬರೆದಿರುವ ಅವರು, ಉಪ ಚುನಾವಣೆಯಲ್ಲಿ ಪಕ್ಷದ ಇಬ್ಬರೂ ಅಭ್ಯರ್ಥಿಗಳು ಸೋಲನುಭವಿಸಿದ್ದಾರೆ. ಪಕ್ಷದ ಈ ಸೋಲಿನ ನೇರ ಹೊಣೆ ಹೊತ್ತು, ಪ್ರತಿಪಕ್ಷ ಸ್ಥಾನಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.

ಈವರೆಗೆ ತಾವು ನೀಡಿದ ಮಾರ್ಗದರ್ಶನ ಬೆಂಬಲಕ್ಕೆ ತಾವು ಆಭಾರಿ ಎಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 ಮುಖಪುಟ /ಸುದ್ದಿ ಸಮಾಚಾರ